BIG NEWS: ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ; ಮಕ್ಕಳಿಗೆ ಧಾರ್ಮಿಕ ಶಿಕ್ಷಣಗಳ ಕೋರ್ಸ್ ಆರಂಭಿಸಲು ನಿರ್ಧಾರ

ಮಂಗಳೂರು: ಧಾರ್ಮಿಕ ಸ್ಥಳಗಳು, ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲು ಹಿಂದೂ ಜನಜಾಗೃತಿ ಸಮಿತಿ ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿಸಿದ್ದು, ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾ ಸಂಘದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೈವ, ದೇವಾಲಯಗಳ ಪಾವಿತ್ರತೆ, ವಸ್ತ್ರ ಸಂಹಿತೆ, ದೇವಾಲಯಗಳಲ್ಲಿ ಧಾರ್ಮಿಕ ಶಿಕ್ಷಣ ವಿಚಾರವಾಗಿ ಚರ್ಚೆ ನಡೆಸಲಾಗಿದೆ.

ಸಭೆಯಲ್ಲಿ ದಕ್ಷಿಣ ಕನ್ನಡದ 100 ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲು ತೀರ್ಮಾನಿಸಲಾಯಿತು. ಫೆಬ್ರವರಿಯಿಂದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೆ ಬರಲಿದೆ.

ಅಲ್ಲದೇ ಪ್ರತಿ ದೇವಾಲಯಗಳಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮೂರು ತಿಂಗಳ ಕೋರ್ಸ್ ನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿ ಸಿದ್ದ ಪಡಿಸಿದೆ. ಈ ಕೋರ್ಸ್ ನಲ್ಲಿ ಹಿಂದೂ ಧರ್ಮ, ದೇವರುಗಳು, ಆಚಾರ-ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ. ವಾರಕ್ಕೆ ಒಮ್ಮೆ ದೇವಾಲಯಗಳಲ್ಲಿ ಧಾರ್ಮಿಕ ಪಾಠ ನಡೆಸುವ ಬಗ್ಗೆಯೂ ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read