ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅನಾಮದೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಯೋಧಕಾರ್ಯ ನಡೆಸಲಾಗುತ್ತಿದೆ.
ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು ಅಸ್ಥಿಪಂಜರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಇಂದು ಮೂರನೆ ದಿನದ ಕಾರ್ಯಾಚರಣೆ ಆರಂಭವಾಗಿದೆ.
ಈಗಗಲೇ ಐದು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಆದರೆ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಇಂದು ನೇತ್ರಾವತಿ ನದಿ ದಡದಲ್ಲಿ 6ನೇ ಸ್ಥಳದಲ್ಲಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕೆಲವೇ ಸಮಯದಲ್ಲಿ ಎಸ್ ಐಟಿ ತಂಡ, ದೂರುದಾರನನ್ನು ಕರೆತಂದು ಸ್ಥಳದಲ್ಲಿ ಶೋಧಕಾರ್ಯ ನಡೆಸಲಿದೆ.