ಧರ್ಮಸ್ಥಳಕ್ಕೆ ಇಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು ತಲುಪಲಿದ್ದಾರೆ. ರಾತ್ರಿ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯುವ ಸ್ಪೀಕರ್ ಯು.ಟಿ. ಖಾದರ್ ಕುಟುಂಬದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read