ನಾಳೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷ ದೀಪೋತ್ಸವ ನವೆಂಬರ್ 26 ರಿಂದ 30ರವರೆಗೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಉಜಿರೆಯಿಂದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹನಾಯಕ, ಮಾಜಿ ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000 ಅಧಿಕ ಭಕ್ತರು, ಅಭಿಮಾನಿಗಳು ಭಜನೆ, ಶಿವ ಪಂಚಾಕ್ಷರಿ ಪಠಣದೊಂದಿಗೆ ಧರ್ಮಸ್ಥಳದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನವೆಂಬರ್ 28ರಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಾಗಸ್ವರ ವಾದನ, ಸಾತ್ವಿಕ ಸಂಗೀತ, ನೃರ್ಯಾರ್ಚನೆ, ಮಾಯ ವಿಲಾಸ ನೃತ್ಯ ನಡೆಯಲಿದೆ.

ನವೆಂಬರ್ 29ರಂದು ಅಮೃತವರ್ಷಿಣಿ ಸಮಾರಂಭದಲ್ಲಿ ಸರ್ವ ಧರ್ಮ ಸಮ್ಮೇಳನದ ಅಧಿವೇಶನ ನಡೆಯಲಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಅಧಿವೇಶನ ಉದ್ಘಾಟಿಸಲಿದ್ದಾರೆ. ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾ ಸಂಸ್ಥಾನದ ಜಯೇಂದ್ರಪುರಿ ಮಹಾಸ್ವಾಮಿಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಶೋಧಕ ಡಾ.ಜಿ.ಬಿ. ಹರೀಶ್, ಡಾ. ಜೋಸೆಫ್ ಎನ್.ಎಂ., ಮೆಹತಾಬ್ ಇಬ್ರಾಹಿಂ ಸಾಬ್ ಕಾಗವಾಡ ಅವರು ಉಪನ್ಯಾಸ ನೀಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read