ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವುದು ನಿಜವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಸರ್ಕಾರ ಮೈಮರೆತರೆ ಏನಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಡಿ.ಕೆ.ಶಿವಕುಮಾರ್ ಅವರು ಈ ರೀತಿ ಹೇಳಿಕೆ ಕೊಟ್ಟು ನುಣುಚಿಕೊಳ್ಳುವ ಪ್ರಯತ್ನ ಮಾಡಬಾರದು. ಈ ಮುಸುಕುಧಾರಿ ಯಾರು? ಎಂದು ಪ್ರಶ್ನಿಸಿದ್ದಾರೆ.
ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದಂತೆ ಬರೆಯುತ್ತಾರೆ. ಅವರೇ ತನಿಖೆ ಮಾಡುತ್ತಾರೆ. ಅವರೇ ತೀರ್ಪು ನೀಡುತ್ತಾರೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ತನಿಖೆಗೆ ಸಮಯ ನಿಗದಿ ಮಾಡಿ ಬೇಗ ಮುಗಿಸಬೇಕು. ಷಡ್ಯಂತ್ರದಲ್ಲಿ ಯಾರು ಶಾಮೀಲಾಗಿದ್ದಾರೆ ಅಂತಾ ಡಿ.ಕೆ.ಶಿವಕುಮಾರ್ ಹೇಳಲಿ ಎಂದು ಆಗ್ರಹಿಸಿದರು.
ನಾವು ಧರ್ಮಸ್ಥಳಕ್ಕೆ ಭೇಟಿಯಾಗಿ ನಮಸ್ಕಾರ ಹಾಕಿ ಬರುತ್ತೇವೆ. ಧರ್ಮಸ್ಥಳ ಭೇಟಿ ಹಿಂದೆ ಯಾವುದೇ ಉದ್ದೇಶವಿಲ್ಲ. ನಾವು ಪ್ರಕರಣದ ತನಿಖೆಯಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ ಎಂದು ಹೇಳಿದರು.