HomeLatest NewsBREAKING: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ: 3...

BREAKING: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ಬಂಗ್ಲಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ: 3 ತಂಡಗಳಾಗಿ SIT ಶೋಧ!

ಮಂಗಳೂರು: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಬಂಗ್ಲಗುಡ್ಡ ಪ್ರದೇಶ ದಟ್ಟ ಅರಣ್ಯದಲ್ಲಿ ಐದು ಕಡೆ ರಾಶಿ ರಾಶಿ ಮೂಳೆಗಳು ಪತ್ತೆಯಾಗಿವೆ.

ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಬಂಗ್ಕಗುಡ್ಡದ ಐದು ಸ್ಥಳಗಳಲ್ಲಿ ಮೂಳೆಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿಯೇ ಮಾನವನ ಮೂಳೆಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಐಟಿ ಅಧಿಕಾರಿಗಳು ಮೂರು ತಂಡಗಳಾಗಿ ವಿಂಗಡಣೆಗೊಂಡು ಬಂಗ್ಲಗುಡ್ಡದ ದಟ್ಟ ಅರಣ್ಯದಲ್ಲಿ ಶೋಧಕಾರ್ಯ ಮುಂದುವರೆಸಿದೆ. ಐದು ಸ್ಥಳಗಳಲ್ಲಿ ಮೂಳೆಗಳು ಪತ್ತೆಯಾಗಿದ್ದು, ಮೂಳೆಗಳನ್ನು ಸೋಕೋ ಟೀಂ ಪೈಪ್ ಮೂಲಕ ಸಂಗ್ರಹಿಸಿ ಎಫ್ ಎಸ್ ಎಲ್ ಗೆ ಕಳುಹಿಸಲು ಸಿದ್ಧತೆ ನಡೆಸಿದೆ.

ಬಂಗ್ಲಗುಡ್ಡದಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಇದು ಹೊಸ ತಿರುವು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular