ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ರಾಜ್ಯ ಬಿಜೆಪಿ ಮತ್ತೊಂದು ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಈಗಾಗಲೇ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಪರ ನಾವಿದ್ದೇವೆ ಎಂಬ ಹೆಸರಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಅಭಿಯಾನ ನಡೆಸಲಾಗಿತ್ತು. ಅಲ್ಲದೇ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಮುಖಂಡರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ.
‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಯಲಿದೆ. ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹೋರಾಟದ ರೂಪುರೇಷೆ ಸಿದ್ಧವಾಗಿದೆ. ಪ್ರತಿಭಟನೆ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡುವ ನಿಟ್ಟಿನಲ್ಲಿಯೂ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.