HomeLatest NewsBREAKING: ಧರ್ಮಸ್ಥಳ ಪ್ರಕರಣ: FIR ರದ್ದು ಕೋರಿ ನಾಲ್ವರಿಂದ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

BREAKING: ಧರ್ಮಸ್ಥಳ ಪ್ರಕರಣ: FIR ರದ್ದು ಕೋರಿ ನಾಲ್ವರಿಂದ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ನ ನಾಲ್ವರು ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದು ಕೋರಿ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ಟಿ.ಜಯಂತ್, ವಿಠಲ ಗೌಡ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ನ್ಯಾ.ಮೊಹಮ್ಮದ್ ನವಾಜ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ ಐಟಿ ತನಿಖಾತಂಡ ಅಂತಿಮ ಹಂತದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ. ಬುರುಡೆ ಗ್ಯಾಮ್ಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ತಡೆಯುವ ನಿಟ್ಟಿನಲ್ಲಿ ಇದೀಗ ಬುರುಡೆ ಗ್ಯಾಂಗ್ ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಮಾಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular