HomeLatest NewsBREAKING: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 'ಬುರುಡೆ ಗ್ಯಾಂಗ್' ಗೆ ಮತ್ತೆ ನೋಟಿಸ್ ನೀಡಿದ SIT

BREAKING: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ‘ಬುರುಡೆ ಗ್ಯಾಂಗ್’ ಗೆ ಮತ್ತೆ ನೋಟಿಸ್ ನೀಡಿದ SIT

ಮಂಗಳೂರು: ಧರ್ಮಸ್ಥಳದ ವಿವಿಧೆಡೆಗಳಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬುರುಡೆ ಗ್ಯಾಂಗ್ ಗೆ ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.

ಬುರುಡೆ ಗ್ಯಾಂಗ್ ಗೆ ಕೆಲ ದಿನಗಳ ಹಿಂದೆ ನೋಟಿಸ್ ಜಾರಿ ಮಾಡಲಾಗಿತ್ತು. ಕೆಲ ಆರೋಪಿಗಳು ಎರಡು ದಿನಗಳ ಹಿಂದಷ್ಟೇ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೊಮ್ಮೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿಠಲಗೌಡಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಗಿರೀಶ್ ಮಟ್ಟೆಣ್ಣವರ್, ಟಿ.ಜಯಂತ್ ಗೆ ನವೆಂಬರ್ ೩ರಂದು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular