HomeLatest NewsBREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಮ್ಯಾಜಿಸ್ಟ್ರೇಟ್ ಮುಂದೆ 2ನೇ ಬಾರಿ ಸ್ವಇಚ್ಛಾ ಹೇಳಿಕೆ ನೀಡಿದ...

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಮ್ಯಾಜಿಸ್ಟ್ರೇಟ್ ಮುಂದೆ 2ನೇ ಬಾರಿ ಸ್ವಇಚ್ಛಾ ಹೇಳಿಕೆ ನೀಡಿದ ಆರೋಪಿ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎರಡನೇ ಬಾರಿ ಸ್ವ ಇಚ್ಛಾ ಹೇಳಿಕೆ ನೀಡಿದ್ದಾನೆ.

ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿದ್ದಾಗಿತಪ್ಪೊಪ್ಪಿಕೊಂಡಿರುವ ಘಟನೆ ನಡೆದಿದೆ. ಬಿಎನ್ ಎಸ್ 183ರಡಿ ಜಡ್ಜ್ ಮುಂದೆ ಹೇಳಿಕೆ ನೀಡಿದ್ದಾನೆ. ನನಗೆ ಬೆದರಿಕೆ ಹಾಕಿದ್ದರಿಂದ ಈ ಹಿಂದೆ ಸುಳ್ಳು ಸ್ಟೇಟ್ ಮೆಂಟ್ ಕೊಟ್ಟಿದ್ದೆ. ಈಗ ಸತ್ಯ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೇಶ್ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ಜಯಂತ್ ಸೇರಿ ಕೆಲವರ ಷಡ್ಯಂತ್ರದಿಂದ ನಾನು ಸುಳ್ಲು ಹೇಳಿದೆ. ಈ ಬಗ್ಗೆ ನನ್ನ ಹೇಳಿಕೆಯ 8ಕ್ಕೂ ಹೆಚ್ಚು ವಿಡಿಯೋ ಮಾಡಿಟ್ಟುಕೊಂಡಿದ್ದರು. ಆ ವಿಡಿಯೋದಲ್ಲಿ ಹೇಳಿದಂತೆ ಜಡ್ಜ್ ಹಾಗೂ ಎಸ್ ಐಟಿ ಮುಂದೆ ಹೇಳಿಕೆ ಕೊಡುವಂತೆ ನನಗೆ ಬೆದರಿಕೆ ಹಾಕಿದ್ದರು. ಜಯಂತ್ ಹಾಗೂ ಗಿರೀಶ್ ಮಟ್ಟೆಣ್ಣವರ್ ನನಗೆ ಬುರುಡೆ ತಂದು ಕೊಟ್ಟಿದ್ದರು. ಅವರ ಮಾತು ನಂಬಿ ನಾನು ತಪ್ಪು ಮಾಡಿದೆ ಎಂದು ನ್ಯಾಯಾಧೀಶರ ಮುಂದೆ ಚಿನ್ನಯ್ಯ ಕಣ್ಣೀರಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 25ರಂದು ಕೋರ್ಟ್ ಗೆ ಹಾಜರು ಪಡಿಸಿದ್ದಾಗ ಚಿನ್ನಯ್ಯ ನ್ಯಾಯಾಧೀಶರ ಮುಂದೆ ಈ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular