ಮಂಗಳೂರು: ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ದೂರು ನೀಡಿದೆ.
ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ಬೆಳ್ತಂಗಡಿ ತಹಶಿಲ್ದಾರ್ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಆಗಮಿಸಿರುವ ನಾಗರಿಕ ಹಿತರಕ್ಷಣಾ ಸಮಿತಿ ಸದಸ್ಯರು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ, ಹೆಸರು ಕೆಡಿಸಿದವರ ವಿರುದ್ಧ ದೂರು ನೀಡಿದ್ದಾರೆ.
ಧರ್ಮಸ್ಥಳದ ಹೆಸರು ಕೆಡಿಸಿ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸುವ ಹಾಗೂ ಒಟ್ಟು ಸಮುದಾಯವನ್ನು ಒಡೆಯುವ ಪ್ರಯತ್ನಗಳಾಗಿವೆ. ತಾಲೂಕನ್ನು ಕೆಟ್ಟದಾಗಿ ಬಿಂಬಿಸುವ ಯತ್ನ ನಡೆದಿದೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.