HomeLatest Newsಧರ್ಮಸ್ಥಳ ಕೇಸ್: ವೀರೇಂದ್ರ ಹೆಗಡೆ, ಕುಟುಂಬದ ವಿರುದ್ಧ ಯಾವುದೇ ಅವಹೇಳನ ಹೇಳಿಕೆ ನೀಡದಂತೆ ಕೋರ್ಟ್ ಆದೇಶ

ಧರ್ಮಸ್ಥಳ ಕೇಸ್: ವೀರೇಂದ್ರ ಹೆಗಡೆ, ಕುಟುಂಬದ ವಿರುದ್ಧ ಯಾವುದೇ ಅವಹೇಳನ ಹೇಳಿಕೆ ನೀಡದಂತೆ ಕೋರ್ಟ್ ಆದೇಶ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಾಲಯ ಸುತ್ತಮುತ್ತ ಅಪರಿಚಿತ ಮೃತದೇಹನಗಳನ್ನು ಹೂತು ಹಾಕಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ಹೊರಡಿಸಿದೆ.

ಪ್ರಕರಣದ ಬಗ್ಗೆ ತಮ್ಮ ಕುಟುಂಬದವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮತ್ತು ಅವಹೇಳನಕಾರಿ ಹೇಳಿಕೆ ನೀಡದಂತೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಎಂ.ಡಿ. ಸಮೀರ್ ಮತ್ತು ಮಾಧ್ಯಮದವರನ್ನು ನಿರ್ದೇಶಿಸಿ ನಿರ್ಬಂಧಕಾಜ್ಞೆ ಹೊರಡಿಸಬೇಕೆಂದು ಕೋರಿ ಡಿ. ಹರ್ಷೇಂದ್ರ ಕುಮಾರ್ ಅಸಲು ದಾವೆ ದಾಖಲಿಸಿದ್ದಾರೆ. ಈ ದಾವೆ ವಿಚಾರಣೆ ನಡೆಸಿದ 11ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular