ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿಯುಂಟು ಮಾಡಲಾಗುತ್ತಿದೆ. ಅಲ್ಲದೇ ಕೆಲ ಯೂಟ್ಯೂಬರ್ ಗಳಿಗೆ ವಿದೇಶದಿಂದ ಫಂಡಿಂಗ್ ಮಾಡಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕ ತನಿಖೆ ನಡೆಸಿವಂತೆ ಹಿಂದೂ ಮುಖಂಡ ತೇಜಸ್ ಗೌಡ ಎನ್ನುವವರು ಇಡಿಗೆ ದೂರು ನೀಡಿದ್ದಾರೆ.
ಕೆಲ ಮುಸ್ಲೀಂ ಯೂಟ್ಯೂಬರ್ ಗಳ ವಿರುದ್ಧ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಎನ್ ಐಎ ಗೂ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
You Might Also Like
TAGGED:dharmasthala case