HomeLatest Newsಧರ್ಮಸ್ಥಳ ಕೇಸ್: ಮತ್ತೆರಡು ಹೊಸ ದೂರುಗಳ ಬಗ್ಗೆಯೂ ಎಸ್ಐಟಿ ತನಿಖೆ

ಧರ್ಮಸ್ಥಳ ಕೇಸ್: ಮತ್ತೆರಡು ಹೊಸ ದೂರುಗಳ ಬಗ್ಗೆಯೂ ಎಸ್ಐಟಿ ತನಿಖೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ವಿಸ್ತರಣೆಯಾಗಲಿದೆ. ಮತ್ತೆರಡು ಹೊಸ ದೂರುಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ.

ಕಾರ್ಯಾಚರಣೆ ವೇಳೆ ಪಾಯಿಂಟ್ 6ರಲ್ಲಿ ಮಾನವನ ಕಳೇಬರ ಪತ್ತೆಯಾಗಿದ್ದು, ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಎಸ್‌ಎಟಿಗೆ ಹಸ್ತಾಂತರಿಸಲಾಗಿದೆ.

ಧರ್ಮಸ್ಥಳದಲ್ಲಿ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿಕೊಳ್ಳದೆ ಮೃತದೇಹ ಹೂತು ಹಾಕಿದ್ದಾರೆ ಎಂದು ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು ಸಲ್ಲಿಸಿದ್ದಾರೆ. ಜುಲೈ 31 ರಂದು 6ನೇ ಪಾಯಿಂಟ್ ನಲ್ಲಿ ಪತ್ತೆಯಾದ ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಈ ಎರಡು ಪ್ರಕರಣಗಳನ್ನು ಎಸ್ಐಟಿಗೆ ಹಸ್ತಾಂತರಿಸಿ ಡಿಜಿ ಐಜಿಪಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular