BREAKING : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ : ‘SIT’ ಗೆ ಮತ್ತೆ 9 ಮಂದಿ ಪೊಲೀಸರ ನೇಮಿಸಿ ಆದೇಶ.!

ಧರ್ಮಸ್ಥಳ : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐ ಟಿ ಗೆ ಮತ್ತೆ 9 ಮಂದಿ ಪೊಲೀಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉನ್ನತ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ 20 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್ ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ್, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read