ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಇದಕ್ಕೂ ಮುನ್ನ ಧರ್ಮಸ್ಥಳ ಪ್ರಕರಣ ಸಂಅಬ್ಂಧ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ, ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ತನಿಖಾ ಪ್ರಗತಿ ಬಗ್ಗೆ ಮಾಹಿಡಿದ್ದಾರೆ. ಆರೋಪಿ ಚಿನ್ನಯ್ಯ ಹಾಗೂ ಗ್ಯಾಂಗ್ ಯಾವುದೇ ಮಾಹಿತಿ ನೀಡದೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಜಾಗೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು ಒಂದು ಗಂಟೆಗಳ ಕಾಲ ಗೃಹ ಸಚಿವರ ಜೊತೆ ಎಸ್ ಐತಿ ಮುಖ್ಯಸ್ಥ ಪ್ರಣವ್ ಮೊಹಂತಿ ಚರ್ಚಿಸಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಗಹೃಸಚಿವ ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನೀಡಿದ್ದು, ಕುತೂಹಲ ಮೂಡಿಸಿದೆ.