HomeLatest NewsBIG NEWS: ಧರ್ಮಸ್ಥಳ ಪ್ರಕರಣ: ಊಹಾಪೋಹ, ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್...

BIG NEWS: ಧರ್ಮಸ್ಥಳ ಪ್ರಕರಣ: ಊಹಾಪೋಹ, ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ, ಊಹಾಪೋಹಗಳನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಲ್ಲಸಲ್ಲದ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ಬಳಿಕ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನೂ ಬಿಡುವ ಪ್ರಶ್ನೆ ಇಲ್ಲ. ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೂ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular