ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಮೌನಮುರಿದಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಧರ್ಮಸ್ಥಳ ಪ್ರಕರಣದ ಕುರುತು ತನಿಖೆ ಬಗ್ಗೆ ವೀರೇಂದ್ರ ಹೆಗ್ಗಡೆಯವರೇ ಸ್ವಾಗತ ಮಾಡಿದ್ದಾರೆ. ಎಸ್ ಐಟಿ ರಚನೆ ಮಾಡಿದಾಗ ಬಿಜೆಪಿಗರು ಮಾತನಾಡಲೇ ಇಲ್ಲ. 15 ಜಾಗ ಅಗೆದು ಎರಡು ಕಡೆ ಮಾತ್ರ ಅಸ್ಥಿಪಂಜರ ಪತ್ತೆಯಾಗಿತ್ತು. 13 ಕಡೆ ಏನೂ ಸಿಗದ ಬಳಿಕ ಬಿಜೆಪಿಯವರು ಮಾತನಾಡಲು ಶುರುಮಾಡಿದ್ದಾರೆ ಎಂದು ಟೀಕಿಸಿದರು.