ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ದೂರುದಾರ ತೋರಿದ್ದ ಮಹತ್ವದ ಸ್ಥಳ 13ನೇ ಪಾಯಿಂಟ್ ನಲ್ಲಿ ಉತ್ಖನನದ ಮೂಲಕ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ದೂರುದಾರ ತೋರಿರುವ 13ನೇ ಪಾಯಿಂಟ್ ನಲ್ಲಿ ಇಂದು ಎಸ್ ಐಟಿ ಅಧಿಕಾರಿಗಳ ತಂಡ ಅಸ್ಥಿಪಂಜರಕ್ಕಾಗಿ ಶೋಧಕಾರ್ಯಾಚರಣೆ ಆರಂಭಿಸಿದೆ. ಮೊದಲಿಗೆ ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದು, ಬಳಿಕ ಜೆಸಿಬಿ ಮೂಲಕ ಮಣ್ಣು ಅಗೆದು ಉತ್ಖನನ ನಡೆಸಲಾಗುತ್ತಿದೆ. ಈ ಜಾಗದಲ್ಲಿ ಸುಮಾರು 18 ಅಡಿಗಳಷ್ಟು ಆಳದವೆರೆಗೂ ಮಣ್ಣು ಅಗೆದು ಪರಿಶೀಲನೆ ನಡೆಸಲು ಎಸ್ ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ 13ನೇ ಪಾಯಿಂಟ್ ಸ್ಥಳಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಭೇಟಿ ನೀಡಿದ್ದು, ಎಸ್ ಐಟಿ ಅಧಿಕರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಶೋಧಕಾರ್ಯಾಚರಣೆಯ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಹಾಜರಿದ್ದು, ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.