ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ.
1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ. ಯುಡಿಆರ್ ಪ್ರಕರಣದ ವೇಳೆ ಮಹಜರಿನಲ್ಲಿ ಅಧಿಕಾರಿಗಳು ಸಹಿ ಹಾಕಿದ್ದಾರೆ. ಧರ್ಮಸ್ಥಳ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರ ವಿಚಾರಣೆ ನಡೆಸಲಾಗಿದೆ.
ಎಸ್ ಐಟಿ ನೋಟಿಸ್ ಹಿನ್ನೆಲೆಯಲ್ಲಿ ಎಲ್ಲರೂ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.