ಮಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದೀಗ ತನಿಖೆಗಾಗಿ ವಿಶೇಷ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರದಲ್ಲಿ ತೆರೆಯಲಾಗಿದೆ.
ಪ್ರಕರಣದ ಬಗ್ಗೆ ದೂರು ನೀಡಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 0824-2005301, 8277986369 ಅಥವಾ ಇಮೇಲ್- sitdps@ksp.gov.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರರೊಬ್ಬರು ತಪ್ಪೊಪ್ಪಿಕೊಂಡಿದ್ದು, ಈ ಬಗ್ಗೆ ಎಸ್ ಐಟಿ ತಂಡ ಶೋಧಕಾರ್ಯ ನಡೆಸಿದೆ. ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದ್ದು, ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಧರ್ಮಸ್ಥಳ ಪ್ರಕರಣ