HomeLatest NewsBREAKING : ಧರ್ಮಸ್ಥಳ ಪ್ರಕರಣ : ಸಹಾಯವಾಣಿ ಆರಂಭ, ಮಾಹಿತಿ ನೀಡಲು ಈ ಸಂಖ್ಯೆಗೆ ಕರೆ...

BREAKING : ಧರ್ಮಸ್ಥಳ ಪ್ರಕರಣ : ಸಹಾಯವಾಣಿ ಆರಂಭ, ಮಾಹಿತಿ ನೀಡಲು ಈ ಸಂಖ್ಯೆಗೆ ಕರೆ ಮಾಡಿ

ಮಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದೀಗ ತನಿಖೆಗಾಗಿ ವಿಶೇಷ ತಂಡದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರದಲ್ಲಿ ತೆರೆಯಲಾಗಿದೆ.

ಪ್ರಕರಣದ ಬಗ್ಗೆ ದೂರು ನೀಡಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 0824-2005301, 8277986369 ಅಥವಾ ಇಮೇಲ್- [email protected] ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರರೊಬ್ಬರು ತಪ್ಪೊಪ್ಪಿಕೊಂಡಿದ್ದು, ಈ ಬಗ್ಗೆ ಎಸ್ ಐಟಿ ತಂಡ ಶೋಧಕಾರ್ಯ ನಡೆಸಿದೆ. ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದ್ದು, ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular