ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ) ಮಂಗಳೂರಿನಲ್ಲಿ ಕಚೇರಿ, ಸಹಾಯವಾಣಿ ಸ್ಥಾಪಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣ ಅಪರಾಧ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ಈಗಾಗಲೇ ರಚಿಸಲಾಗಿದೆ. ತಂಡದ ನೇತೃತ್ವದಲ್ಲಿ ಶವಗಳನ್ನು ಹೂತು ಹಾಕಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಇನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಮಂಗಳೂರು ನಗರದಲ್ಲಿ ಕಚೇರಿಯನ್ನು ಸ್ಥಾಪಿಸಿದೆ. ಈ ಪ್ರಕರಣದ ಬಗ್ಗೆ ಎಸ್ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಈ ಕೆಳಕಂಡಂತೆ ತಂಡವನ್ನು ಸಂಪರ್ಕಿಸಬಹುದು.
ಕಚೇರಿ ವಿಳಾಸ
ನಿರೀಕ್ಷಣ ಮಂದಿರ, ಮಲ್ಲಿಕಟ್ಟೆ ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ(ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ)
ದೂರವಾಣಿ 0824-2005301,
ವಾಟ್ಸ್‌ಆ್ಯಪ್ ಸಂ: 8277986369.
ಇ-ಮೇಲ್ ವಿಳಾಸ: sitdps@ksp.gov.in ಸಂಪರ್ಕಿಸಬಹುದು ಎಂದು ಹೇಳಲಾಗಿದೆ.