HomeLatest Newsಧರ್ಮಸ್ಥಳ ಕೇಸ್: ಮಂಗಳೂರಿನಲ್ಲಿ ಎಸ್ಐಟಿ ಕಚೇರಿ, ಸಹಾಯವಾಣಿ ಸ್ಥಾಪನೆ

ಧರ್ಮಸ್ಥಳ ಕೇಸ್: ಮಂಗಳೂರಿನಲ್ಲಿ ಎಸ್ಐಟಿ ಕಚೇರಿ, ಸಹಾಯವಾಣಿ ಸ್ಥಾಪನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ) ಮಂಗಳೂರಿನಲ್ಲಿ ಕಚೇರಿ, ಸಹಾಯವಾಣಿ ಸ್ಥಾಪಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣ ಅಪರಾಧ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ಈಗಾಗಲೇ ರಚಿಸಲಾಗಿದೆ. ತಂಡದ ನೇತೃತ್ವದಲ್ಲಿ ಶವಗಳನ್ನು ಹೂತು ಹಾಕಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಇನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಮಂಗಳೂರು ನಗರದಲ್ಲಿ ಕಚೇರಿಯನ್ನು ಸ್ಥಾಪಿಸಿದೆ. ಈ ಪ್ರಕರಣದ ಬಗ್ಗೆ ಎಸ್ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಈ ಕೆಳಕಂಡಂತೆ ತಂಡವನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಚೇರಿ ವಿಳಾಸ

ನಿರೀಕ್ಷಣ ಮಂದಿರ, ಮಲ್ಲಿಕಟ್ಟೆ ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ(ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ)

ದೂರವಾಣಿ 0824-2005301,

ವಾಟ್ಸ್‌ಆ್ಯಪ್ ಸಂ: 8277986369.

ಇ-ಮೇಲ್ ವಿಳಾಸ: [email protected] ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular