ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲು ಪಾಲಾಗಿದ್ದಾರೆ. ಈ ನಡುವೆ ಜಾಮೀನಿಗಾಗಿ ಚಿನ್ನಯ್ಯ ಕೋರ್ಟ್ ಮೆಟ್ಟಿಲೇರಿದ್ದು, ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ.
ಚಿನ್ನಯ್ಯ ತನಗೆ ಜಾಮೀನು ನೀಡುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಚಿನ್ನಯ್ಯ ಪರ ಕಾನೂನು ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದಾರೆ. ಎಸ್ ಐಟಿ ಪರ ವಕೀಲರು ಚಿನ್ನಯ್ಯ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ಕೋರ್ಟ್, ಸೆಪ್ಟೆಂಬರ್ 16ಕ್ಕೆ ಆದೇಶ ಕಾಯ್ದಿರಿಸಿದೆ. ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಚಿನ್ನಯ್ಯಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.