HomeLatest NewsBREAKING: ಧರ್ಮಸ್ಥಳ ಬುರುಡೆ ಪ್ರಕರಣ: ಆರೋಪಿ ಚಿನ್ನಯ್ಯಗೆ ಜಾಮೀನು ಮಂಜೂರು

BREAKING: ಧರ್ಮಸ್ಥಳ ಬುರುಡೆ ಪ್ರಕರಣ: ಆರೋಪಿ ಚಿನ್ನಯ್ಯಗೆ ಜಾಮೀನು ಮಂಜೂರು

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 12 ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬುರುಡೆ ಕೇಸ್ ನಲ್ಲಿ ಶಿವಮೊಗ್ಗ ಜೈಲು ಸೇರಿದ್ದ ಆರೋಪಿ ಚಿನ್ನಯ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 1 ಲಕ್ಷ ರೂ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular