ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
ಆರೋಪಿ ಬುರುಡೆ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಆರೋಪಿ ಚಿನ್ನಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳ ಸಂಗ್ರಹ ಹಿನ್ನೆಲೆಯಲ್ಲಿ ಹಾಗೂ ಆತನ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಬುರುಡೆ ಚಿನ್ನಯ್ಯ ಜೈಲುಪಾಲಾಗಿದ್ದು, ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.