HomeLatest NewsBIG NEWS: ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ: 6 ಜನರು ಅರೆಸ್ಟ್

BIG NEWS: ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ: 6 ಜನರು ಅರೆಸ್ಟ್

ಮಂಗಳೂರು: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪದ್ಮನಾಭ್ ಪ್ರಸಾದ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು. ಪೊಲೀಸ್ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರು ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular