ಮಂಗಳೂರು: ಬೆನಕ ಆಸ್ಪತ್ರೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡ್ ಹಾಗೂ ಗಿರೀಶ್ ಮಟ್ಟೆಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪೊಲೀಸ್ ಠಾಣೆಗೆ ಮಹೇಶ್ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣವರ್ ವಿಚಾರಣೆ ಹಾಜರಾಗಿದ್ದಾರೆ. ಆಸ್ಪತ್ರೆ ಬಳಿ ಅಕ್ರಮವಾಗಿ ಕೂಟ ಸೇರಿಸಿ ಗಲಾಟೆ ಮಾಡಿದ ಪ್ರಕರಣ ಸಂಬಂಧ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಸೇರಿ 50ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ನೋಟಿಸ್ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ.