ಬೆಂಗಳೂರು: ಧರ್ಮಸ್ಥಳದ ವಿವಿಧೆಡೆ ಶವ ಹೂತಿಟ್ಟ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್ ನನ್ನು ಬಲಿ ಕೊಡ್ತಿದ್ದಾರೆ ಎಂದು ಬಿಜೆಪಿ ಮಾಜಿ ಶಸಾಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪಿ.ರಾಜೀವ್, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಸಿಎಂ ಸಿದ್ದರಾಮಯ್ಯ ಸುತ್ತಮುತ್ತ ಇರುವವರೇ ಷಡ್ಯಂತ್ರ ನಡೆಸಿದ್ದಾರೆ. ಸಿಎಂ ಕಾರ್ಯಾಲಯದವೇ ಈ ಷಡ್ಯಂತ್ರ ನಡೆಸಿದ್ದಾರೆ. ಎಲ್ಲರೂ ದೆಹಲಿಯಲ್ಲಿ ಕುಳಿತು ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದರು.
ಎಸ್ ಐಟಿ ತನಿಖೆ ಸರಿಯಾಗಿ ನಡೆಸುತ್ತಿಲ್ಲ. ಪ್ರಕರಣದ ಬಗ್ಗೆ ಎನ್ ಐಎ ತನಿಖೆಯಾಗಲಿ. ಆಗ ಪ್ರಕರಣದಲ್ಲಿ ಯಾರಿದ್ದಾರೆ ಎಂಬುದು ಬಯಲಾಗುತ್ತದೆ ಎಂದರು. ಮಾಸ್ಕ್ ಮ್ಯಾನ್ ನನ್ನು ಮೊದಲು ವಿಚಾರಣೆ ನಡೆಸಬೇಕಿತ್ತು. ಅದನ್ನು ಬಿಟ್ಟು ಮೊದಲು ಗುಂಡಿ ತೋಡಿಸಿದ್ದೇಕೆ? ಮಾಸ್ಕ್ ಮ್ಯಾನ್ ಗೆ ಕೂಲಿ ಕೊಟ್ಟು ಕರೆದುಕೊಂಡು ಬಂದಿದ್ದಾರೆ. ಅದೇ ರೀತಿ ಕೂಲಿ ಕೊಟ್ಟು ಜೈಲಿಗೆ ಕಳುಹಿಸುವ ಕೆಲಸ ಮಾಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.