ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಆರೋಪಿ ಚಿನ್ನಯ್ಯನನ್ನು ಬಂಧಿಸಲಾಗಿದ್ದು, ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನನ್ನು ಮಧ್ಯರಾತ್ರಿ 1.20ಕ್ಕೆ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗ ಜೈಲಿನ ಕಾವೇರಿ ಬ್ಯಾರಕ್ ನಲ್ಲಿ ಚಿನ್ನಯ್ಯನನ್ನು ಇರಿಸಲಾಗಿದೆ.
ಭದ್ರತೆಯ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಜಿಲ್ಲೆಗೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹದಲ್ಲಿ ಕೆಲವು ದಿನಗಳ ಕಾಲ ಕಾವೇರಿ ಬ್ಯಾರಕ್ ನಲ್ಲಿ ಚಿನ್ನಯ್ಯ ಉಳಿಯಲಿದ್ದಾನೆ. ಆತನ ನಡವಳಿಕೆಯನ್ನು ನೋಡಿ ಬೇರೆ ಬ್ಯಾರಕ್ ಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಹೈಟೆಕ್ ಆಗಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸುಮಾರು 850 ಕೈದಿಗಳು ಇದ್ದಾರೆ.