ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ತಿರುವುದಾಗಿ ಮಾಸ್ಕ್ ಮ್ಯಾನ್ ದೂರುದಾರ ಹೇಳಿರುವ ವಿಚಾರವಾಗಿ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಇಂದು ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ.
ಈ ನಿಟ್ಟಿನಲ್ಲಿ ಗೃಹ ಸಚಿವ ಪರಮೇಶ್ವರ್ ವಿಧಾನಸೌಧದಲ್ಲಿ ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಗೃಹ ಸಚಿವ ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬಳಿಕ ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐತಿ ತನಿಖೆ ವಿಚಾರವಾಗಿ ವಿಧಾನಸಭೆಯಲ್ಲಿ ಉತ್ತರ ನೀಡಲಿದ್ದಾರೆ. ಧರ್ಮಸ್ಥಳ ವಿರುಧದ ಷಡ್ಯಂತ್ರ ಬಯಲು ಮಾಡಬೇಕು. ಮುಸುಕುಧಾರಿ ಹೆಸರು ಬಹಿರಂಗಪಡಿಸಬೇಕು ಹಾಗೂ ಎಸ್ ಐಟಿ ಮಧ್ಯಂತರ ವರದಿ ಬಿಡುಗಡೆಗೊಳಿಸಬೇಕು ಎದು ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ತನಿಖೆ ಬಗ್ಗೆ ಸದನದಲ್ಲಿ ಏನು ಉತ್ತರ ನೀಡಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.