ಚಿಕ್ಕಬಳ್ಳಾಪುರ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಧರ್ಮಸ್ಥಳ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಹೀಗಾಗಿ ಧರ್ಮಸ್ಥಳದ ಜೊತೆ ನಾವಿದ್ದೇವೆ. ಆಗಸ್ಟ್ 16ರಂದು ಧರ್ಮಸ್ಥಳ ಚಲೋ ಅಭಿಯಾನ ನಡೆಸಲಾಗುವುದು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ಗೌರಿಬಿದನೂರಿನಲ್ಲಿ ಮಾತನಾಡಿದ ಎಸ್.ಆರ್.ವಿಶ್ವನಾಥ್, ಧರ್ಮಸ್ಥಳ ಮಂಜುನಾಥ ಸ್ವಾಮಿ ತುಂಬಾ ಪವರ್ ಫುಲ್. ಮಂಜುನಾಥ ಸ್ವಾಮಿ ಮೇಲೆ ಆಣೆ, ಪ್ರಮಾಣ ಮಾಡಲು ಹೆದರುತ್ತಾರೆ. ಅಂತಹ ಮಂಜುನಾಥನ ಸನ್ನಿದಿಧರ್ಮಸ್ಥಳದ ಮೇಲೆ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಆಗಸ್ಟ್ 16ರಂದು ಯಲಹಂಕದಿಂದ ಧರ್ಮಸ್ಥಳಕ್ಕೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. 200ಕ್ಕೂ ಹೆಚ್ಚು ಕಾರುಗಳ ಮೂಲಕ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷವಾಕ್ಯದೊಂದಿಗೆ ಕಾರುಗಳಿಗೆ ಕೇಸರಿ ಧ್ವಜ ಕಟ್ಟಿಕೊಂಡು ಧರ್ಮಸ್ಥಳಕ್ಕೆ ತೆರಳುತ್ತೇವೆ ಎಂದರು.
ಅಲ್ಲಿ ದೇವರ ದರ್ಶನ ಪಡೆದು ವಾಪಸ್ ಬರುತ್ತೇವೆ. ಬಳಿಕ ರಾಜ್ಯದ ಇತರ ಕ್ಷೇತ್ರಗಳಿಂದಲೂ ರ್ಯಾಲಿ ನಡೆಯಲಿದೆ ಎಂದರು.
ಇನ್ನು ಅನಾಮಿಕ ವ್ಯಕ್ತಿಯನ್ನು ಗಲ್ಲಿಗೇರಿಸಬೇಕು. ಅತ್ಯಾಚಾರ, ಕೊಲೆಯಾದವರನ್ನು ನಾನು ಹೂತುಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ನೀಡಿರುವುದು ನೋಡಿದರೆ ಅವನನ್ನೇ ಮೊದಲು ಗಲ್ಲಿಗೇರಿಸಬೇಕು. ಅತ್ಯಾಚಾರ ಕೊಲೆ ಆಗಿರೋದು ಗೊತ್ತಿದ್ದರೂ ಹೂತು ಹಾಕಿದ್ರೆ ಆತ ಕೂಡ ಆರೋಪಿಯೇ. ಹಾಗಾಗಿ ಮೊದಲು ಆತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.