ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಯಲಹಂಕದಿಂದ ಧರ್ಮಸ್ಥಳವರೆಗೆ 300 ಕಾರುಗಳಲ್ಲಿ ಯಾತ್ರೆ ಆರಂಭವಾಗಿದೆ.
ಮಧ್ಯಾಹ್ನ 2 ಗಂಟೆ ವೇಳೆಗೆ ಧರ್ಮಸ್ಥಳ ತಲುಪಲಿದ್ದಾರೆ. ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳಿಕ ಇಂದು ಧರ್ಮಸ್ಥಳದಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗ್ ಧರ್ಮಸ್ಥಳದಲ್ಲಿ ವಿಶೇಷ ಸಂಕಲ್ಪದೊಂದಿಗಿ ಪೂಜೆ ನೆರವೇಸಲಿದ್ದಾರೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರ ಶಾಸಕರು, ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಮೂಲಕ ಧರ್ಮಸ್ಥಳದ ಪರ ನಾವಿದೇವೆ ಎಂಬ ಸಂದೇಶವನ್ನು ನೀಡುವುದಾಗಿ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.