ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಎಸ್ ಐಟಿ ತಂದಕ್ಕೆ ಹೊಸ ಜಾಗ ತೋರಿಸಿದ್ದಾನೆ.
ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ ಹೊಸ ಜಾಗವನ್ನು ತೋರಿಸಿದ್ದು, ಆ ಸ್ಥಳದಲ್ಲಿ ಎಸ್ ಐಟಿ ತಂಡ ಇಂದು ಶೋಧ ಕಾರ್ಯಾಚರಣೆ ನಡೆಸಿದೆ.
ನೇತ್ರಾವತಿ ನದಿ ಪಕ್ಕದಲ್ಲಿರುವ ಖಾಸಗಿ ವ್ಯಕ್ತಿಗಳ ಅಡಿಕೆ ತೋಟವೊಂದರ ಮೂಲಕ ಸಾಗಿರುವ ಎಸ್ ಐಟಿ ತಂಡ ದಟ್ಟ ಅರಣ್ಯ ಪ್ರದೇಶದಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ ಐಟಿ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದಲ್ಲಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ.