ಮಂಗಳೂರು: ಧರ್ಮಸ್ಥಳ ಪ್ರಕರಣ ಕ್ಷಣಕ್ಕೊಂದು ತಿರುವುಪಡೆದುಕೊಳ್ಳುತ್ತಿದೆ. ಧರ್ಮಸ್ಥಳದ ವಿವಿಧೆಡೆ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿರುವ ಎಸ್ ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.
ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್ ನಲ್ಲಿ ಇದೀಗ ಆತನ ಜೊತೆಗಿದ್ದ ವಕೀಲನನ್ನೇ ಸಾಕ್ಷಿಯನ್ನಾಗಿ ಎಸ್ ಐಟಿ ಅಧಿಕಾರಿಗಳು ಮಾಡಿದ್ದಾರೆ. ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 16 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ಎಸ್ ಐಟಿ ಆತನ ವಕೀಲನ ಸಮ್ಮುಖದಲ್ಲಿಯೇ ಆತನಿಂದ ಹೇಳಿಕೆ ದಾಖಲಿಸಿಕೊಂಡಿದೆ.
ಈ ನಿಟ್ಟಿನಲ್ಲಿ ಚಿನ್ನಯ್ಯನ ತಪ್ಪೊಪ್ಪಿಗೆ ಹೇಳಿಕೆ ಕೇಸ್ ನಲ್ಲಿ ವಕೀಲನನ್ನೇ ಸಾಕ್ಷಿಯನ್ನಾಗಿ ಮಾಡಿದ್ದು, ಕೋರ್ಟ್ ನಲ್ಲಿ ಕೂಡ ವಕೀಲ ಸಾಕ್ಷಿ ಹೇಳಬೇಕಾದ ಅಗತ್ಯವಿದೆ.