ಮಂಗಳೂರು: ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ತನಿಖೆ ನಡೆಸುತ್ತಿರುವಎಸ್ ಐಟಿ ಅಧಿಕಾರಿಗಳ ತಂಡ 8ನೇ ಪಾಯಿಂಟ್ ನಲ್ಲಿ ಶೋಧಕಾರ್ಯ ಆರಂಭಿಸಿದೆ.
ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ 13 ಸ್ಥಳಗಳ ಬಗ್ಗೆ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ 7 ಸ್ಥಳಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಗಳಿಗಾಗಿ ಶೋಧ ನಡೆಸಲಾಗಿದೆ. 6ನೇ ಪಾಯಿಂಟ್ ನಲ್ಲಿ ಮಾತ್ರ ಇಡಿದಾದ ಅಸ್ಥಿಪಂಜರ ಪತ್ತೆಯಾಗಿದೆ. ಇಂದು 7ನೇ ಪಾಯಿಂಟ್ ನಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದು, ಈ ವೇಳೆ ಕರವಸ್ತ್ರವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಸದ್ಯ 7ನೇ ಸ್ಥಳದಲ್ಲಿ ಶೋಧಕಾರ್ಯ ಮುಕ್ತಾಯಗೊಂಡಿದ್ದು, 8ನೇ ಪಾಯಿಂಟ್ ನಲ್ಲಿ ಯಂತ್ರದ ಮೂಲಕ ಮಣ್ಣು ಅಗದೆ ಅಸ್ಥಿಪಂಜರಕ್ಕಾಗಿ ಶೋಧ ನಡೆಸಲಾಗುತ್ತಿದೆ. ಶೋಧಕಾರ್ಯದ ವೇಳೆ ಎಸ್ ಐಟಿ ಅಧಿಕಾರಿಗಳ ಜೊತೆಗೆ ಎಫ್ ಎಸ್ ಎಲ್, ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.