ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೋತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ತೋರಿಸಿರುವ ಜಾಗಗಳಲ್ಲಿ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪಾಯಿಂಟ್ 13ರಲ್ಲಿ ಪರಿಶೋಧನೆಗೆ ಜಿಪಿಆರ್ ಬಳಸಲು ಸಿದ್ಧತೆ ನಡೆಸಿದೆ.
ಭೂಮಿ ಅಗೆಯುವ ಬದಲು ಜಿಪಿಆರ್ ತಂತ್ರಜ್ಞಾನದ ಮೂಲಕ ಶೋಧನಡೆಸಲು ಎಸ್ ಐಟಿ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಎಸ್ ಐಟಿ ಅಧಿಕಾರಿಗಳು ತಜ್ಞರ ಸಲಹೆ ಪಡೆಯುತ್ತಿದ್ದಾರೆ.
ದೂರುದಾರ ತೋರಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ತಂತ್ರಜ್ಞಾನದ ಮೂಲಕ ಪರಿಶೀಧ ನಡೆಸಲು ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಪೊಲೀಸ್ ಹಿರಿಯ ಅಧಿಅಕರಿಗಳ ಜೊತೆ ಸಭೆ ನಡೆಸಿದ್ದಾರೆ. ಜಿಪಿಆರ್ ಬಳಕೆ ಮೂಲಕ ಅಸ್ಥಿಪಂಜರದ ಬಗ್ಗೆ ನಿಖರ ಮಾಹಿತಿ ಕಲೆಹಾಕಬಹುದಾಗಿದ್ದು, ಈ ನಿಟ್ಟಿನಲ್ಲಿ ಸಭೆ ಬಳಿಕ ಎಸ್ ಐಟಿ ನಿರ್ಧಾರ ಕೈಗೊಳ್ಳಲಿದೆ.