HomeEntertainmentBIG NEWS: ಗಾಳಿ ಮಾತುಗಳನ್ನು ನಂಬಬೇಡಿ; ಎರಡು ದಿನಗಳಲ್ಲಿ ನಾನೇ ಬಂದು ಉತ್ತರಿಸುತ್ತೇನೆ ಎಂದ ನಟ...

BIG NEWS: ಗಾಳಿ ಮಾತುಗಳನ್ನು ನಂಬಬೇಡಿ; ಎರಡು ದಿನಗಳಲ್ಲಿ ನಾನೇ ಬಂದು ಉತ್ತರಿಸುತ್ತೇನೆ ಎಂದ ನಟ ಪ್ರಕಾಶ್ ರಾಜ್

ಮಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಚಿನ್ನಯ್ಯ ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರ ಹೆಸರು ಉಲ್ಲೇಖಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ ಎಸ್ ಐಟಿ ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದಾನೆ. ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವರ ಪಾತ್ರದ ಬಗ್ಗೆ ಉಲ್ಲೇಖಿಸಲಾಗಿದೆ. ನಟ ಪ್ರಕಾಶ್ ರಾಜ್ ಬಗ್ಗೆಯೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ನಟ ಪ್ರಕಾಶ್ ರಾಜ್ ಹೆಸರನ್ನು ಆರೋಪಿ ಚಿನ್ನಯ್ಯ ಉಲ್ಲೇಖಿಸಿರುವ ವಿಚಾರ ತಿಳಿಯುತ್ತಿದ್ದಂತೆ ಇಂತಹ ಗಾಳಿಮಾತುಗಖನ್ನು ನಂಬಬೇಡಿ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಪ್ರಕಾಶ್ ರಾಜ್, ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ನನ್ನ ಬಗ್ಗೆ ಕೆಲ ಸುದ್ದಿ ಬರುತ್ತಿರುವುದನ್ನು ಗಮನಿಸುದ್ದೇನೆ. ಇದು ಅತಿ ಸೂಕ್ಷ್ಮವಾದ ವಿಚಾರ. ಕೋಟ್ಯಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿರುವುದರಿಂದ ಈ ರೀತಿ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯ ಎಂದು ತಿಳಿಸಿದ್ದಾರೆ.

ನಾನು ದೂರದ ಊರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ಉತ್ತರಿಸುತ್ತೇನೆ. ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮೂಲಕ ಉತ್ತರ ಕೊಡುತ್ತೇನೆ. ಅಲ್ಲಿಯವರೆಗೆ ಯಾವುದೇ ಗಾಳಿಮಾತುಗಳನ್ನು ನಂಬಬೇಡಿ. ಕೆಲ ದುರುಳರು ಕಟ್ಟಲೆತ್ನಿಸುತ್ತಿರುವ ರಕ್ಕೆಪುಕ್ಕಗಳನ್ನು ನಂಬಬೇಡಿ ಎಂದು ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.

ಧರ್ಮಸ್ಥಳ ಬುರುಡೆ ಗ್ಯಾಂಗ್‌ನ ಷಡ್ಯಂತ್ರವನ್ನು ರಿಟ್‌ ಅರ್ಜಿಯಲ್ಲಿ ಉಲ್ಲೇಖಿಸಿರುವ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಬಹುಭಾಷಾ ಖ್ಯಾತ ನಟ ಪ್ರಕಾಶ್‌ ರಾಜ್‌ ಹೆಸರನ್ನೂ ಸಹ ಉಲ್ಲೇಖ ಮಾಡಿದ್ದಾನೆ. ತಲೆ ಬುರುಡೆ ನೀಡಿ ಪೊಲೀಸರಿಗೆ ದೂರು ಕೊಟ್ಟ ಬಳಿಕ ಕೇರಳದ ರೆಸಾರ್ಟ್‌ಗೆ ಕರೆದೊಯ್ದರು. ಅಲ್ಲಿ ರಾತ್ರಿ 8 ಗಂಟೆಗೆ ನಟ ಪ್ರಕಾಶ್ ರಾಜ್ ಅವರಿಗೆ ಕರೆ ಮಾಡಿ ಅರ್ಜಿದಾರರಿಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ಮಾತನಾಡಿ ಗಿರೀಶ್ ಮಟ್ಟಣ್ಣನವರ್ ಹೇಳಿಕೊಟ್ಟಂತೆ ಹೇಳಿಕೆ ನೀಡಬೇಕು. ತಾವು 29 ನೇ ತಾರೀಕಿಗೆ ಬಂದು ಅಪ್ಪಿಕೊಳ್ಳುವುದಾಗಿ ಹೇಳಿದರು. ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದಾಗ ಸಂಭ್ರಮಿಸಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸುವ ಸಮಯ ಬಂದಿತೆಂದು ಸಂಭ್ರಮಿಸಿದರು. ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣವರ್ ಬಂಗ್ಲೆಗುಡ್ಡದ ಸ್ಥಳ ಗುರುತಿಸಿ ಅಲ್ಲಿ ಉತ್ಖನನ ನಡೆಸಿ ಸರ್ಕಾರದ ಹಣ ವ್ಯಯ ಮಾಡಿಸುವಂತೆ ಸೂಚಿಸಿದರು. ಯೋಜನೆಯ ಬಜೆಟ್ 200 ಕೋಟಿ ಇದ್ದು, ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಲು ಸಹಕರಿಸಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಅವರು ಹೇಳಿದ ಜಾಗಗಳನ್ನು ಎಸ್ ಐಟಿಗೆ ತೋರಿಸುವಂತೆ ಸೂಚಿಸಿ, ಹಾಗೆ ಮಾಡದಿದ್ದರೆ ತಮ್ಮ ಪತ್ನಿಯನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಆದರೆ ಅಲ್ಲಿ ಯಾವುದೇ ಶವದ ಅವಶೇಷ ಸಿಗಲಿಲ್ಲ. ಧರ್ಮಸ್ಥಳದ ವಿರುದ್ಧ ಇವರ ಷಡ್ಯಂತ್ರದಿಂದ ಭೀತನಾಗಿ ಸತ್ಯ ಹೇಳಲು ತೀರ್ಮಾನಿಸಿದೆ. ನಂತರ ಎಸ್ ಐಟಿ ಮುಂದೆ ಷಡ್ಯಂತ್ರದ ಹೇಳಿಕೆ ನೀಡಿದೆ ಎಂದು ಚಿನ್ನಯ್ಯ ಉಲ್ಲೇಖಿಸಿದ್ದಾನೆ.

ಇಡೀ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರನ್ನು ಚಿನ್ನಯ್ಯ ರಿಟ್‌ ಅರ್ಜಿಯಲ್ಲಿ ಉಲ್ಲೇಖಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ನಟ ಪ್ರಕಾಶ್ ರಾಜ್ ಯಾವ ಉತ್ತರ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular