HomeKarnatakaಶ್ರೀ ಮಂಜುನಾಥ ಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಸಮಯ ಬದಲಾವಣೆ

ಶ್ರೀ ಮಂಜುನಾಥ ಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಸಮಯ ಬದಲಾವಣೆ

ಮಂಗಳೂರು: ರಾಜ್ಯದ ಸುಪ್ರಸಿದ್ಧ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆ, ಇಂದಿನಿಂದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿದಿನ ಬೆಳಗ್ಗೆ 8:30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆಯ ನಂತರ ದೇವಸ್ಥಾನದ ಹೊರಾಂಗಣದಿಂದ ಮಾತ್ರ ದರ್ಶನಕ್ಕೆ ಅವಕಾಶವಿದೆ. ಭಕ್ತಾದಿಗಳು ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular