ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಂಡಿದೆ. ಒಂದೆಡೆ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿಚಾರಣೆ ಮುಂದುವರೆದಿದೆ. ಈ ನಡುವೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ, ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್ ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.