ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಧರ್ಮೇಂದ್ರ ಅವರ ಆರೋಗ್ಯ ಉತ್ತಮವಾಗಿಲ್ಲ ಎಂದು ವ್ಯಕ್ತಿಯೋರ್ವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಧರ್ಮೇಂದ್ರ ಅವರ ಮಗ ಸನ್ನಿ ಡಿಯೋಲ್, ಅವರು ವೆಂಟಿಲೇಟರ್ ನಲ್ಲಿ ಇಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಮನೆಗೆ ತೆರಳಲು ಸೂಚಿಸಿಲ್ಲ ಎಂದಷ್ಟೇ ತಿಳಿಸಿದ್ದಾರೆ.
