HomeIndiaBREAKING: ಸ್ಪೀಕರ್ ಓಂ ಬಿರ್ಲಾ ಭೇಟಿಯಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್: ಕುತೂಹಲ ಮೂಡಿಸಿದ...

BREAKING: ಸ್ಪೀಕರ್ ಓಂ ಬಿರ್ಲಾ ಭೇಟಿಯಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್: ಕುತೂಹಲ ಮೂಡಿಸಿದ ನಡೆ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಹಗರನ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು, ರಾಜಕೀಯ ನಾಯಕರು ದೆಹಲಿಗೆ ದೌಡಾಯಿಸುತ್ತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸ್ಭಾ ಸ್ಪೀಕರ್ ಅವರನ್ನು ಅವರನ್ನು ಭೇಟಿಯಾಗಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನಿನ್ನೆ ನಾಯಕರ ಮೇಲೆ ನಡೆದ ಪೊಲೀಸ್ ಹಲ್ಲೆ ಖಂಡಿಸಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ‘ಇಂಡಿಯಾ’ ಒಕ್ಕೂಟದ ನಾಯಕರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಆಗಮಿಸಿದ್ದು, ಸಂಸತ್ತಿನ ಉಭಯ ಸದನಗಳಲ್ಲಿಯೂ ನೀಟ್ ಅಕ್ರಮ ಮತ್ತೆ ಪ್ರತಿಧ್ವನಿಸಿದೆ. ಲೋಕಸಭೆಯಲ್ಲಿ ವಿಪಕ್ಷ ಸದದಸ್ಯರು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಅಲ್ಲದೇ ನೀಟ್ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಪಕ್ಷಗಳ ಗದ್ದಲ-ಕೋಲಾಹಲ ತೀವ್ರಗೊಳ್ಳುತ್ತಿದ್ದಂತೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಚರ್ಚೆಗೆ ಸಿದ್ಧವಿರುವುದಾಗಿ ಕೇಂದ್ರ ಸಹಿವರು ಸದನದಲ್ಲಿ ತಿಳಿಸಿದ್ದಾರೆ. ಈ ನಡುವೆ ಸ್ಪೀಕರ್ ಓಂ ಬಿರ್ಲಾ ಲೋಕಸಭಾ ಕಾಲಾಪವನ್ನು ಕೆಲ ಕಾಲ ಮುಂಡಿದ್ದಾರೆ.

ಸಂಸತ್ ಭವನದ ಒಳಗೂ ಹಾಗೂ ಹೊರಗೂ ನೀಟ್ ಅಕ್ರಮ ಖಂಡಿಸಿ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳು ಭುಗಿಲೇಳುತ್ತಿರುವ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಲಾಪ ಮುಂದೂಡಿಕೆ ಬೆನ್ನಲ್ಲೇ ನಡೆದ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular