‘ಧರ್ಮೋ ರಕ್ಷತಿ ರಕ್ಷತಃ’ : ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಮೊದಲ ಪ್ರತಿಕ್ರಿಯೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಚಿತಾ ರಾಮ್ ‘’ ನಮಸ್ಕಾರ , ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..!ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ..ಎಂದು ನಟಿ ರಚಿತಾ ರಾಮ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read