HomeCrimeಧಾರವಾಡದಲ್ಲಿ ಭೀಕರ ಹತ್ಯೆ: ಮನೆಗೆ ನುಗ್ಗಿ ಯೂತ್ ಕಾಂಗ್ರೆಸ್ ಮುಖಂಡನ ಕೊಚ್ಚಿ ಕೊಂದ ದುಷ್ಕರ್ಮಿಗಳು

ಧಾರವಾಡದಲ್ಲಿ ಭೀಕರ ಹತ್ಯೆ: ಮನೆಗೆ ನುಗ್ಗಿ ಯೂತ್ ಕಾಂಗ್ರೆಸ್ ಮುಖಂಡನ ಕೊಚ್ಚಿ ಕೊಂದ ದುಷ್ಕರ್ಮಿಗಳು

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಡೆದಿದ್ದೇನು?

ಧಾರವಾಡದ ಹಾಶ್ಮಿನಗರದಲ್ಲಿರುವ ಫೈರೋಜ್ ಪಠಾಣ್ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಫೈರೋಜ್ ಅವರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಹಂತಕರು ಕೃತ್ಯ ಎಸಗಿದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರು ಈ ಫೈರೋಜ್ ಪಠಾಣ್?

ಹತ್ಯೆಗೀಡಾದ ಫೈರೋಜ್ ಪಠಾಣ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಆರಂಭದಲ್ಲಿ ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದ ಇವರು, ಪ್ರಸ್ತುತ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ದುರದೃಷ್ಟಕರ ಸಂಗತಿಯೆಂದರೆ, ಹತ್ಯೆಗೀಡಾದ ಫೈರೋಜ್ ಪಠಾಣ್ ಅವರಿಗೆ ಇದೇ ತಿಂಗಳು (ಏಪ್ರಿಲ್) 24 ರಂದು ಮದುವೆ ನಿಶ್ಚಯವಾಗಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಮದುವೆಯ ತಯಾರಿಯಲ್ಲಿ ಬಿಜಿಯಾಗಿದ್ದಾಗಲೇ ದುಷ್ಕರ್ಮಿಗಳು ಅವರ ಜೀವನವನ್ನೇ ಅಂತ್ಯಗೊಳಿಸಿದ್ದಾರೆ.

ಪೊಲೀಸ್ ತನಿಖೆ ಚುರುಕು: ವಿಷಯ ತಿಳಿಯುತ್ತಿದ್ದಂತೆಯೇ ಉಪನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಭೀಕರ ಕೃತ್ಯದ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಂತಕರ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ

ಫೈರೋಜ್ ಅವರ ಆಪ್ತರು ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.ಸದ್ಯಕ್ಕೆ ಹಳೆ ವೈಷಮ್ಯ ಅಥವಾ ರಾಜಕೀಯ ಕಾರಣಕ್ಕೆ ಈ ಕೊಲೆ ನಡೆದಿದೆಯೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular