ಧಾರವಾಡ: ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಯು.ವಿನಾಯಕ(25), ಮಂಜುನಾಥ್(29), ಬಸವರಾಜ್(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

