HomeJobsBig Update: ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಮುಂದೂಡಿಕೆ

Big Update: ಧಾರವಾಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಮುಂದೂಡಿಕೆ

ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳದ ಕುರಿತು ಮಹತ್ವದ ಅಪ್‌ಡೇಟ್ ಇದೆ. ಫೆಬ್ರವರಿ 22 ರಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳವನ್ನು ಮುಂದೂಡಿಕೆ ಮಾಡಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಕರ್ನಾಟಕ ಕಾಲೇಜು ಮೈದಾನದಲ್ಲಿ ಫೆಬ್ರವರಿ 22ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಮುಂದೂಡಿಕೆ ಮಾಡಲಾಗಿದೆ.

ಉದ್ಯೋಗ ಮೇಳ ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಉದ್ಯೋಗ ಮೇಳದಲ್ಲಿ 18 ರಿಂದ 45 ವರ್ಷ ವಯೋಮಿತಿಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ, ಹಾಗೂ ವಿವಿಧ ಬೇರೆ ಬೇರೆ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ/ ಯುವತಿಯರು, ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದಾಗಿದೆ.

ಮಂಡ್ಯದಲ್ಲಿ ಉದ್ಯೋಗ ಮೇಳ: ಮಂಡ್ಯ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಫೆಬ್ರವರಿ 21ರ ಶನಿವಾರದಂದು ಮಂಡ್ಯ ವಿಶ್ವವಿದ್ಯಾಲಯದ ಕಲಾಭವನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.

ಎಸ್‌ಎಸ್ಎಲ್‌ಸಿಯಿಂದ ಇಂದ ಹಿಡಿದು ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳು ರೆಸ್ಯೂಮ್ ಜೊತೆಗೆ ಈ ಮೇಳಕ್ಕೆ ಹಾಜರಾಗಿ ಸ್ಥಳದಲ್ಲೇ ಸಂದರ್ಶನ ಎದುರಿಸಿ ನಿಮ್ಮ ಕನಸಿನ ಉದ್ಯೋಗವನ್ನು ಪಡೆಯಬಹುದು.

ಐಟಿ, ಬ್ಯಾಂಕಿಂಗ್ ಹಾಗೂ ಉತ್ಪಾದನಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾವಿರಾರು ಅವಕಾಶಗಳು ನಿಮಗಾಗಿ ಕಾಯುತ್ತಿವೆ. ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

ದಕ್ಷಿಣ ಕನ್ನಡದಲ್ಲಿಯೂ ಉದ್ಯೋಗ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಡಿ.ಡಿ.ಯು-ಜಿಕೆವೈ ಎನ್.ಆರ್.ಎಲ್.ಎಂ ಯೋಜನೆಯಡಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 21ರಂದು ಆಯೋಜನೆ ಮಾಡಲಾಗಿದೆ. 

ಈ ಉದ್ಯೋಗ ಮೇಳ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಇಲ್ಲಿ ನಡೆಯಲಿದೆ. ಈ ಮೇಳದಲ್ಲಿ ಬೆಂಗಳೂರು, ಮಂಗಳೂರು ಮತ್ತು ರಾಜ್ಯಾದ್ಯಂತ ಇರುವ ಐಟಿ, ಸಾಫ್ಟ್‌ವೇರ್, ಮ್ಯಾನುಫ್ಯಾಕ್ಚರಿಂಗ್, ಆಟೋ ಮೊಬೈಲ್, ಬ್ಯಾಂಕಿಂಗ್, ಫೈನಾನ್ಸ್, ರಿಟೇಲ್ ಆ್ಯಂಡ್ ಸರ್ವಿಸ್ ಸೆಕ್ಟರ್,  ಎಜುಕೇಶನ್, ಹಾಸ್ಪಿಟಲ್ ಸೇರಿದಂತೆ ಸುಮಾರು  80ಕ್ಕಿಂತ ಹೆಚ್ಚಿನ ಕಂಪನಿಗಳು ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular