HomeKarnatakaಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ

ಧಾರವಾಡ: ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ, ಅಳ್ನಾವರ, ನವಲಗುಂದ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ ತಾಲೂಕುಗಳಲ್ಲಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಆಜ್ಞೆ ಹೊರಡಿಸಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ, ಅಳ್ನಾವರ, ನವಲಗುಂದ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ ತಾಲೂಕುಗಳಲ್ಲಿ ಅಗಸ್ಟ್ 25, 2026 ರ ರಾತ್ರಿ 11:59 ಗಂಟೆಯಿಂದ ಅಗಸ್ಟ್ 26, 2026 ರ ರಾತ್ರಿ 11:59 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಆದೇಶಿಸಲಾಗಿದೆ.

ಆದ್ದರಿಂದ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀಯರ್ ಬಾರ್‍ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಜಿಲ್ಲೆಯ ಅಬಕಾರಿ ಇನ್ಸ್‍ಪೆಕ್ಟರರ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 21(2) ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಆರಕ್ಷಕ ಅಧೀಕ್ಷಕರು, ಉಪ ಆರಕ್ಷಕ ಅಧೀಕ್ಷಕರ, ಅಬಕಾರಿ ಉಪ ಆಯುಕ್ತರು ಹಾಗೂ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಇವರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular