HomeUncategorizedಧಾರವಾಡದಲ್ಲಿ ಲೇಡೀಸ್ ಪಿಜಿಗೆ ಬೆತ್ತಲೆಯಾಗಿ ನುಗ್ಗಲು ಯತ್ನಿಸಿದ ವ್ಯಕ್ತಿ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಧಾರವಾಡದಲ್ಲಿ ಲೇಡೀಸ್ ಪಿಜಿಗೆ ಬೆತ್ತಲೆಯಾಗಿ ನುಗ್ಗಲು ಯತ್ನಿಸಿದ ವ್ಯಕ್ತಿ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಧಾರವಾಡ: ಮಹಿಳೆಯರ ವಸತಿ ನಿಲಯಕ್ಕೆ (ಲೇಡೀಸ್ ಪಿಜಿ) ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನುಗ್ಗಲು ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಈ ವ್ಯಕ್ತಿಯ ಅಸಭ್ಯ ವರ್ತನೆಯ ದೃಶ್ಯಗಳು ಪಿಜಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹೌದು. ಧಾರವಾಡದಲ್ಲಿ ಮಹಿಳೆಯರ ಸುರಕ್ಷತೆಯೇ ಪ್ರಶ್ನೆಯಾಗುವಂತಹ ರೀತಿಯಲ್ಲಿ ವ್ಯಕ್ತಿಯೊಬ್ಬ ಲೇಡೀಸ್ ಪಿಜಿಗೆ ಬೆತ್ತಲೆಯಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ. ಈತನ ಅಸಭ್ಯ ವರ್ತನೆ ಪಿಜಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಉಪನಗರ ಪೊಲೀಸರು ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ.

ಲೇಡೀಸ್ ಪಿಜಿಗೆ ಬೆತ್ತಲೆಯಾಗಿ ನುಗ್ಗಿದ ವ್ಯಕ್ತಿಯ ವರ್ತನೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪತ್ತೆಹಚ್ಚಲು ಧಾರವಾಡದ ಉಪನಗರ ಪೊಲೀಸರು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮಹಿಳೆಯರ ವಸತಿ ನಿಲಯಗಳ ಬಳಿ ಇಂತಹ ಅಸಭ್ಯ ವರ್ತನೆಗಳು ಆತಂಕಕ್ಕೆ ಕಾರಣವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆ: 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿ

ಧಾರವಾಡ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆಯು ಅಕ್ಟೋಬರ್ 27 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಮತ ಎಣಿಕೆ ಸುಗಮವಾಗಿ ಜರುಗಿಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ನೇಹಲ್ ಆರ್. ಅವರು ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

 ಅಕ್ಟೋಬರ್ 27 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿರುತ್ತಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅಕ್ಟೋಬರ್ 23ಕ್ಕೆ ವಿಶೇಷ ಸಾಂದರ್ಭಿಕ ರಜೆ

ವಿಧಾನಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅ. 23 ರಂದು ನಡೆಯಲಿದ್ದು, ಅಂದು ಮತದಾರ ನೌಕರರು ಪೂರ್ವಾನುಮತಿ ಪಡೆಯುವ ಷರತ್ತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದು. ಅರ್ಹ ಪದವೀಧರ ಮತದಾರರು ಮಾತ್ರ ಮತ ಚಲಾಯಿಸಲು ಈ ಸವಲತ್ತು ಪಡೆಯಬಹುದು. ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅರ್ಹ ಪದವೀಧರರಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular