HomeKarnatakaಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ದಿಢೀರ್ ಭೇಟಿ

ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ದಿಢೀರ್ ಭೇಟಿ

“ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ” ಎಂದು ಧಾರವಾಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

ಮಂಗಳವಾರ ಅವರು ಧಾರವಾಡ ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ, ನಂತರ ಜಿಲ್ಲಾ ಪಂಚಾಯತಿ 3ನೇ ಮಹಡಿಯಲ್ಲಿ ಸ್ಥಾಪಿಸಿರುವ, ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ನೇರ ವೀಕ್ಷಣೆಗೆ ಇರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿದರು.

ಮಾಧ್ಯಮಗಳ ಜೊತೆ ಮಾತನಾಡಿ, “ಜಿಲ್ಲೆಯಲ್ಲಿ ಒಟ್ಟು 43 ಪರೀಕ್ಷಾ ಕೇಂದ್ರಗಳ ಚಟುವಟಿಕೆಗಳನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಲಾಗುತ್ತಿದೆ. ಇಂದು ಆಂಗ್ಲ ವಿಷಯದ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಜಿಲ್ಲಾ ಪಂಚಾಯತಿ ಕಚೇರಿಯ ಮೂರನೇ ಮಹಡಿಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯಿಂದಲೇ ಎಲ್ಲಾ 43 ಕೇಂದ್ರಗಳ ವೆಬ್ ಕಾಸ್ಟಿಂಗ್ ಅನ್ನು ಮಾನಿಟರಿಂಗ್ ಮಾಡಲಾಗುತ್ತಿದೆ” ಎಂದು ಹೇಳಿದರು.

“ಎಲ್ಲಾ ಕೇಂದ್ರಗಳಲ್ಲಿಯೂ ಶಾಂತಿಯುತ ಮತ್ತು ಸುವ್ಯವಸ್ಥಿತ ವಾತಾವರಣದಲ್ಲಿ ಯಾವುದೇ ಗೊಂದಲವಿಲ್ಲದೆ ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮತ್ತು ನಿರ್ಭಯವಾಗಿ ಪರೀಕ್ಷೆಯನ್ನು ಬರೆಯುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಅಕ್ರಮಗಳು ನಡೆಯದಂತೆ ಮನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ವೆಬ್ ಸ್ಟ್ರೀಮಿಂಗ್ ಕೇಂದ್ರಗಳಿಂದ ಸಿಇಓ ಭುವನೇಶ ಪಾಟೀಲ ಅವರು ಪರೀಕ್ಷಾ ಕೇಂದ್ರಗಳಿಗೆ ದೂರವಾಣಿ ಕರೆ ಮಾಡಿ, ಪರೀಕ್ಷೆ ಆಯೋಜನೆ ಬಗ್ಗೆ ಹಾಗೂ ವಿದ್ಯಾರ್ಥಿಗಳ ಪ್ರತಿಕ್ರಿಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಿಇಓ ಭುವನೇಶ ಪಾಟೀಲ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಕರ್ನಾಟಕ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಳಮಡ್ಡಿಯ ಕೆ.ಇ.ಬೋರ್ಡ ಕಾಲೇಜುಗಳ ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ಕೊಟ್ಟರು.

ಕಾಲೇಜುಗಳಲ್ಲಿ ಸ್ಥಾಪಿಸಿರುವ ಸಿಸಿ ಟಿವಿ ನಿರ್ವಹಣಾ ಕೊಠಡಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳು ಶಿಸ್ತಿನಿಂದ ಹಾಗೂ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುತ್ತಿರುವದನ್ನು ಗಮನಿಸಿದರು. ಸ್ಥ

ಳದಲ್ಲಿದ್ದ ಜಾಗೃತ ದಳದ ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಪ್ರಶ್ನೆ ಪತ್ರಿಕೆ ಗೌಪ್ಯತೆಯನ್ನು ಕಾಪಾಡುವಂತೆ ಹಾಗೂ ನಕಲು ನಡೆಯದಂತೆ ಮುನ್ನಚ್ಚರಿಕೆ ವಹಿಸಲು ಹಾಗೂ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದರು.

ಇಂದು ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಒಟ್ಟು 25,215 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 24,784 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 431 ವಿದ್ಯಾಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular